ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ

Twitter
Facebook
LinkedIn
WhatsApp
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ (Kukke Shri Subrahmanya Swamy Temple) ಹಿಂದೂಯೇತರ ಅಧಿಕಾರಿಯನ್ನು ನೇಮಿಸಿದ ಆರೋಪ ಕೇಳಿಬಂದಿದೆ. ಆದರೆ, ಮಜರಾಯಿ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಈ ಆರೋಪವನ್ನು ಅಲ್ಲಗಳೆದಿದ್ದು, ಇದು ಬಿಜೆಪಿಯ (BJP) ಸುಳ್ಳು ಸುದ್ದಿ ಎಂದಿದ್ದಾರೆ. ದೇಗುಲದ ನೂತನ ಎಇಒ ಆಗಿ ಏಸುರಾಜ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆರಂಭವಾಗಿತ್ತು. ಏಸುರಾಜ್ ಹಿಂದೂವೇ (Hindu) ಅಥವಾ ಮತಾಂತರಗೊಂಡ ಕ್ರಿಶ್ಚಿಯನ್ನರೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು.

ಏಸುರಾಜ್ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ವಿಹೆಚ್​​ಪಿ ಸಂದೇಶ ಪ್ರಕಟಿಸಿತ್ತು.

ರಾಮಲಿಂಗಾ ರೆಡ್ಡಿ ಹೇಳಿದ್ದೇನು?

ಏಸುರಾಜ್ ಅಧಿಕಾರ ಸ್ವೀಕಾರ ಗೊಂದಲದ ಬಗ್ಗೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸ್ಪಷ್ಟನೆ ನೀಡಿರುವ ರಾಮಲಿಂಗಾ ರೆಡ್ಡಿ, ಇದು ಬಿಜೆಪಿಯ ಮತ್ತೊಂದು ಫೇಕ್ ವಾಟ್ಸ್​ಆ್ಯಪ್ ಯುನಿವರ್ಸಿಟಿಯ ಸುಳ್ಳು ಸುದ್ದಿ ಎಂದು ಟೀಕಿಸಿದ್ದಾರೆ.

ಬಿಜೆಪಿಯ ಮತ್ತೊಂದು ಫೇಕ್ ವಾಟ್ಸ್​ಆ್ಯಪ್ ಯುನಿವರ್ಸಿಟಿಯ ಸುಳ್ಳು ಸುದ್ದಿ. ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರೆಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಕರ್ನಾಟಕ ಬಿಜೆಪಿಯ ಮತ್ತೊಂದು ಸುಳ್ಳು ಹಬ್ಬಿಸುವ ಸೋಶಿಯಲ್ ಮೀಡಿಯಾ ವಾಟ್ಸಾಪ್ ಫೇಕ್ ಯುನಿವರ್ಸಿಟಿಯ ಆಟವಾಗಿದೆ. ಅವರು ಹಿಂದುಳಿದ ಜಾತಿಗೆ ಸೇರಿದವರಾಗಿದ್ದು, ದಾಖಲೆಗಳು ಇಲ್ಲಿವೆ ಎಂದು ದಾಖಲೆಗಳನ್ನು ಲಗತ್ತಿಸಿದ್ದಾರೆ.

ರಾಜ್ಯದಲ್ಲಿ ಇನ್ನೊಂದು ಹಂತದ ಚುನಾವಣೆ ಹತ್ತಿರ ಇರುವುದರಿಂದ ಜನರನ್ನು ದಾರಿ ತಪ್ಪಿಸಿ ಅವರ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸುತ್ತಿರುವ ಬಿಜೆಪಿಗೆ ಸೋಲಿನ ಭಯ ಶುರುವಾಗಿರುವುದು ಸ್ಪಷ್ಟ ಎಂದು ರಾಮಲಿಂಗಾ ರೆಡ್ಡಿ ಕಿಡಿಕಾರಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist