ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸತ್ಯಕ್ಕೆ ಸಮಾಧಿ ಕಟ್ಟಿ ಸುಳ್ಳಿನಯಾತ್ರೆಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ - ಹೆಚ್‌ಡಿಕೆ

Twitter
Facebook
LinkedIn
WhatsApp
ಕಲ್ಲುಬಂಡೆ ನುಂಗಿದ ರಾಕ್ಷಸ ಡಿಕೆ ಶಿವಕುಮಾರ್-ಡಿಕೆ ಶಿವಕುಮಾರ್ ವಿರುದ್ಧ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ʼಸುಳ್ಳಿನ ಸರಮಾಲೆʼಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುವ ʼರಾಜಕೀಯ ಹುಂಬತನʼವಲ್ಲದೆ ಮತ್ತೇನೂ ಅಲ್ಲ. ಸತ್ಯಕ್ಕೆ ಸಮಾಧಿ ಕಟ್ಟಿ ʼಸುಳ್ಳಿನಯಾತ್ರೆʼಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ ಎಂದು ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, 1989ರಲ್ಲಿ ತಮಿಳುನಾಡು ಒತ್ತಡಕ್ಕೆ ಮಣಿದು ವಿ.ಪಿ.ಸಿಂಗ್ ಸರಕಾರ ಕಾವೇರಿ ಟ್ರಿಬ್ಯೂನಲ್ ರಚಿಸಿತ್ತು. ಆಗ ವೀರೇಂದ್ರ ಪಾಟೀಲರು ಸಿಎಂ ಆಗಿದ್ದರೆ, ಪುಟ್ಟಸ್ವಾಮಿ ಗೌಡರು ನೀರಾವರಿ ಮಂತ್ರಿ. ಈ ಟ್ರಿಬ್ಯೂನಲ್ ಬೇಡವೇ ಬೇಡ ಎಂದು ದನಿಯೆತ್ತಿದ ಏಕೈಕ ನಾಯಕರು ದೇವೇಗೌಡರು. ಆದರೆ, ಅವರ ಮಾತನ್ನು ಯಾರೂ ಕೇಳಲಿಲ್ಲ ಎಂದಿದ್ದಾರೆ.

“ಈಗ ʼಮಿ.ಸುಳ್ಳಯ್ಯʼ ಹೊಸ ಕಥೆ, ಚಿತ್ರಕಥೆ ಬರೆದಿದ್ದಾರೆ. 1968ರಲ್ಲೇ ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಪ್ರಯತ್ನಿಸಿತ್ತಂತೆ, 2017ರಲ್ಲೇ ಕಾಂಗ್ರೆಸ್ ಸರಕಾರ ಡಿಪಿಆರ್‌‌ ಸಿದ್ಧಪಡಿಸಿ 5,912 ಕೋಟಿ ರೂ. ಯೋಜನಾ ವೆಚ್ಚ ನಿಗದಿ ಮಾಡಿತ್ತು. ಸಮ್ಮಿಶ್ರ ಸರಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಮತ್ತೆ 9,000 ಕೋಟಿ ರೂ. ಮೊತ್ತದ ವಿಸ್ತೃತ ಡಿಪಿಆರ್‌‌ ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸಿದ್ದರಂತೆ” ಎಂದು ಹೇಳಿದ್ದಾರೆ.
ಅಬ್ಬಾ..! ʼಸಿದ್ದಸುಳ್ಳುಶೂರ!!ʼ. ಸುಳ್ಳು ಸೃಷ್ಟಿಗೊಂದು ಆಸ್ಕರ್ ಇರಬೇಕಿತ್ತು. ಮೇಕೆದಾಟು ಸಮಗ್ರ ಯೋಜನಾ ವರದಿ-ಡಿಪಿಆರ್‌ ಸಿದ್ಧವಾಗಿ ಕೇಂದ್ರಕ್ಕೆ ಸಲ್ಲಿಕೆ ಆಗಿದ್ದು 2018ರಲ್ಲಿ ನಾನು ಸಿಎಂ ಆಗಿದ್ದಾಗಲೇ. ಇದರಲ್ಲಿ ಡಿಕೆಶಿ ಪಾತ್ರವೇನೂ ಇರಲಿಲ್ಲ. ಈ ಸತ್ಯವನ್ನು ʼಸಿದ್ದಹಸ್ತರುʼ ಮುಚ್ಚಿಟ್ಟ ಪರಮಾರ್ಥವೇನು? ಎಂದು ಪ್ರಶ್ನಿಸಿದ್ದಾರೆ.
ನನ್ನ ಸಂಪುಟದಲ್ಲಿ ಜಲಸಂಪನ್ಮೂಲ ಮಂತ್ರಿಯಾಗಿದ್ದವರು ಮೇಕೆದಾಟು ವಿಚಾರದಲ್ಲಿ ನಾನು ಮತ್ತು ನನ್ನ ಸಂಪುಟ ಸಹೋದ್ಯೋಗಿ ಹೆಚ್.ಡಿ.ರೇವಣ್ಣ ಅವರು ಆಗಿನ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾಗ ಎಲ್ಲಿದ್ದರು? ಜನರಿಗೆ ತಿಳಿಯಬೇಕಲ್ಲವೆ? ಎಂದು ಕೇಳಿದ್ದಾರೆ.
ನನ್ನ ಮನವಿ ಮೇರೆಗೆ ಅಂದು ಗಡ್ಕರಿ ಅವರು ತಕ್ಷಣವೇ ಡಿಪಿಆರ್‌‌ ಸಿದ್ಧಪಡಿಸಿ ಕಳಿಸಿ ಎಂದು ಹೇಳಿದ್ದರು. ಆ ಸಭೆಗೆ ಡಿ.ಕೆ.ಶಿವಕುಮಾರ್ ಬರಲೇ ಇಲ್ಲ. ಅಂದು ನಾನು ದೆಹಲಿಯಲ್ಲಿ ಮಾಧ್ಯಮಗಳ ಜತೆ ಮೇಕೆದಾಟು ಯೋಜನೆ ಬಗ್ಗೆ ಹಾಗೂ ಗಡ್ಕರಿ ಅವರ ಜತೆಗಿನ ಚರ್ಚೆಯ ವಿವರಗಳ ಕುರಿತು ಮಾತನಾಡಿದ್ದೆ ಎಂದಿದ್ದಾರೆ.
ಕ್ಷಣಕ್ಕೊಂದು ಬಣ್ಣ ಬದಲಿಸುವ ಇವರ ನಿಜಬಣ್ಣ ಪಿ.ವಿ.ನರಸಿಂಹರಾವ್ ಪ್ರಧಾನಿ ಆಗಿದ್ದಾಗಲೇ ಕನ್ನಡಿಗರಿಗೆ ಅರಿವಾಗಿತ್ತು. ಬೆಂಗಳೂರಿಗೆ ಕಾವೇರಿ 4ನೇ ಹಂತದಲ್ಲಿ ನ್ಯಾಯಸಮ್ಮತವಾಗಿ ಧಕ್ಕಬೇಕಿದ್ದ 9 ಟಿಎಂಸಿ ನೀರನ್ನು ತಮಿಳುನಾಡು ಒತ್ತಡಕ್ಕೆ ಮಣಿದು ಸಾರಾಸಗಟಾಗಿ ನಿರಾಕರಿಸಿತ್ತು ಇದೇ ಕಾಂಗ್ರೆಸ್! ಎಂದು ದೂರಿದ್ದಾರೆ.
ಹೋಗಲಿ, ಆ 9 ಟಿಎಂಸಿ ನೀರು ಬೆಂಗಳೂರಿಗೆ ತಂದವರು ಯಾರು? ಅದೇ ʼಸುಳ್ಳಯ್ಯʼನನ್ನು ವಿತ್ತಮಂತ್ರಿ, ಡಿಸಿಎಂ ಮಾಡಿದ ದೇವೇಗೌಡರೇ. ಬೆನ್ನಿಗಿರಿದು ಹೋದವರ ನಾಲಿಗೆಯ ಮೇಲೆ ಸತ್ಯಕ್ಕೆ ತಾವಿದೆಯೇ? ಸಾಧಿಸಿ ತೋರಿದ್ದನ್ನು ಹೇಳಿಕೊಳ್ಳದ ಆ ಹಿರಿಯ ಜೀವದ ತ್ಯಾಗವನ್ನೂ ʼಹೈಜಾಕ್ʼ ಮಾಡುವ ಹುನ್ನಾರಷ್ಟೇ ಇದು ಎಂದು ಟೀಕಿಸಿದ್ದಾರೆ.
2013ರಲ್ಲಿ ಇದೇ ‘ಸಿದ್ದಹಸ್ತರು’ ಸಿಎಂ ಆದ ಮೇಲೆ ನಡೆದ ವಿಧಾನಮಂಡಲ ಜಂಟಿ ಕಲಾಪದಲ್ಲಿ ರಾಜ್ಯಪಾಲರ ಭಾಷಣದಲ್ಲಿ; “ಕಾವೇರಿ ಐ ತೀರ್ಪಿನ ಭಾಗವಾಗಿ ಕಾವೇರಿ ವಿಸ್ತರಣಾ, ಮುಂದುವರಿದ ಹಾಗೂ ನವೀಕರಣ ಯೋಜನೆಗಳ ಜಾರಿಗೆ ಕೇಂದ್ರದ ಅನುಮೋದನೆ ಕೋರಲಾಗುವುದು” ಎಂದು ಹೇಳಿಸಿದ್ದರು ಎಂದಿದ್ದಾರೆ.
ಕೇಂದ್ರದ ಅನುಮೋದನೆ ಎಂದರೆ, ಮತ್ತೆ ಮತ್ತೆ ಅರ್ಜಿ ಹಿಡಿದು ಕೇಂದ್ರದ ಮರ್ಜಿ ಕಾಯುವುದು. ಅದಕ್ಕೆ, ಅಂದೇ ಸದನದಲ್ಲಿ ಜೆಡಿಎಸ್ ಆ ಭಾಷಣವನ್ನು ವಿರೋಧಿಸಿತ್ತು. ಕಾವೇರಿ ಐ ತೀರ್ಪಿನ ಭಾಗವಾಗಿ ನಮ್ಮ ಪಾಲಿನ ನೀರು ಬಳಕೆಗೆ ಕ್ರಮ ಕೈಗೊಳ್ಳುವುದು ನಮ್ಮ ಹಕ್ಕು. ಈ ಸರಳ ವಿಷಯವೂ ಆವತ್ತಿನ ಸಿಎಂಗೆ ಅರ್ಥವಾಗಲಿಲ್ಲ ಎಂದು ಹೇಳಿದ್ದಾರೆ.
ಚಾಮರಾಜನಗರದ ಶ್ರೀ ಚಾಮರಾಜೇಶ್ವರನ ಸನ್ನಿಧಿಯಲ್ಲಿ ಸಿದ್ದಹಸ್ತರು ʼಸತ್ಯʼ ನುಡಿಯಬೇಕಿತ್ತು. ಆದರೆ, ಆ ಶಿವನ ಶಿರದಲ್ಲಿ ನೆಲೆನಿಂತ ಗಂಗೆಯ ಸಾಕ್ಷಿಯಾಗಿ ʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ. ತಪ್ಪಿಗೆ ಪ್ರಾಯಶ್ಚಿತ್ತ ತಪ್ಪಿದ್ದಲ್ಲ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು