ಸದ್ದು ಮಾಡುತ್ತಿರುವ Hyundai Exter, ಈ ಕಾರಿಗೆ ಈಗ ಬಾರಿ ಬೇಡಿಕೆ!

ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL) ತನ್ನ ಬಹುನಿರೀಕ್ಷಿತ ಹ್ಯುಂಡೈ ಎಕ್ಸ್‌ಟರ್ (Hyundai Exter) ಮೈಕ್ರೋ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತು. ಈ ಹೊಸ ಕಾರಿಗೆ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ ಎಸ್‌ಯುವಿಗೆ ಭಾರತೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯನ್ನು ಪಡೆದುಕೊಂಡಿದೆ.
ಕಡಿಮೆ ಮೌಲ್ಯಕ್ಕೆ ಅತಿ ಹೆಚ್ಚಿನ ಸೌಲಭ್ಯಗಳು ಈ ಕಾರಿನಲ್ಲಿ ಲಭ್ಯ ಇರುವುದರಿಂದ ಭಾರತೀಯ ಗ್ರಾಹಕರ ಮನ ಗೆಲ್ಲಲು ಸಾಧ್ಯವಾಗಿದೆ.
ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL) ಕಂಪನಿಯು ಎಕ್ಸ್‌ಟರ್ ಕಾರಿಗಾಗಿ 50,000 ಕ್ಕೂ ಹೆಚ್ಚು ಬುಕಿಂಗ್‌ಗಳನ್ನು ಸ್ವೀಕರಿಸಿದ್ದಾರೆ. ಬಿಡುಗಡೆಯಾದ ಕೇವಲ 30 ದಿನಗಳಲ್ಲಿ ಬುಕಿಂಗ್ 10,000 ರಿಂದ 50,000ಕ್ಕೆ ಏರಿತು. ಹ್ಯುಂಡೈ ಕೂಡ ಮೂರನೇ ಒಂದು ಭಾಗದಷ್ಟು ಬುಕ್ಕಿಂಗ್‌ಗಳು AMT ರೂಪಾಂತರಗಳಿಗಾಗಿ ಎಂಬ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ ಎಸ್‌ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.5,99,900 ಆಗಿದೆ.
ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ ಎಸ್‌ಯುವಿಗೆ ಭಾರೀ ಬೇಡಿಕೆಯನು ಹೊಂದಿರುವುದರಿಂದ ಈ ಕಾರಿನ EX ಮತ್ತು EX(O) ರೂಪಾಂತರಗಳ ಕಾಯುವ ಅವಧಿಯು 1 ವರ್ಷದವರೆಗೆ ತಲುಪಿದೆ. ಆದರೆ ಇತರ ರೂಪಾಂತರಗಳಿಗೆ ಇದು 5 ರಿಂದ 6 ತಿಂಗಳ ನಡುವೆ ಇರುತ್ತದೆ. ಹ್ಯುಂಡೈ ಎಕ್ಸ್‌ಟರ್ ಕಾರು ಏಳು ರೂಪಾಂತರಗಳಲ್ಲಿ ಲಭ್ಯವಿದೆ. ಇವು EX, EX(O), S, S(O), SX, SX(O) ಮತ್ತು SX(O) ಆಗಿದೆ.
ಇತ್ತೀಚೆಗೆ ಹೊಸದಾಗಿ ಬಿಡುಗಡೆಗೊಂಡ ಹ್ಯುಂಡೈ ಎಕ್ಸ್‌ಟರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಪಂಚ್, ಸಿಟ್ರನ್ ಸಿ3 ಮತ್ತು ಮಾರುತಿ ಇಗ್ನಿಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಇತ್ತೀಚೆಗೆ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಹ್ಯುಂಡೈನ ಘಟಕದಲ್ಲಿ ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಲಾಗಿದೆ. ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನಲ್ಲಿ 1.2-ಲೀಟರ್, 4-ಸಿಲಿಂಡರ್ ಎಂಜಿನ್‌ನೊಂದಿಗೆ ಬಂದಿದೆ.
ಇದು ಪೆಟ್ರೋಲ್ ಮತ್ತು ಸಿಎನ್‌ಜಿ ಎರಡರಲ್ಲೂ ಕಾರ್ಯನಿರ್ವಹಿಸುತ್ತದೆ. ಪೆಟ್ರೋಲ್ ರೂಪದಲ್ಲಿ, ಹುಂಡೈ ಎಕ್ಸ್‌ಟರ್‌ನ ಎಂಜಿನ್ 81.8 bhp ಪವರ್ ಮತ್ತು 113.8 Nm ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಎಕ್ಸ್‌ಟರ್ ಕಾರಿನ CNG ಆವೃತ್ತಿಯು 67.7 bhp ಪವರ್ ಮತ್ತು 95.2 Nm ನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಈ ಹ್ಯುಂಡೈ ಎಕ್ಸ್‌ಟರ್ ಪೆಟ್ರೋಲ್ ಅನ್ನು 5-ಸ್ಪೀಡ್ ಮ್ಯಾನುವಲ್ ಅಥವಾ ಎಎಮ್‌ಟಿ ಗೇರ್‌ಬಾಕ್ಸ್‌ನೊಂದಿಗೆ ನೀಡಲಾಗುತ್ತದೆ. ಆದರೆ ಸಿಎನ್‌ಜಿ ಆವೃತ್ತಿಯಲ್ಲಿ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಮಾತ್ರ ನೀಡಲಾಗಿದೆ. ಎಕ್ಸ್‌ಟರ್ ಪೆಟ್ರೋಲ್ ಮಾದರಿಯು 19.4 ಕಿ.ಮೀ ಮೈಲೇಜ್ ನೀಡಿದರೆ, AMT ಮಾದರಿ 19.2 ಕಿ.ಮೀ ಮೈಲೇಜ್ ನೀಡುತ್ತದೆ.ಇನ್ನು CNG ಆವೃತ್ತಿಯು ಭರ್ಜರಿ 27.1 ಕಿ.ಮೀ ಮೈಲೇಜ್ ನೀಡುತ್ತದೆ.
ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನಲ್ಲಿ ಕೆಲವು ವಿಭಾಗ-ಮೊದಲ ಫೀಚರ್ಸ್ ಗಳಲ್ಲಿ, ಅಂತರ್ನಿರ್ಮಿತ ಡ್ಯಾಶ್‌ಕ್ಯಾಮ್, ಶಾರ್ಕ್ ಫಿನ್ ಆಂಟೆನಾ, ಫುಟ್‌ವೆಲ್ ಲೈಟಿಂಗ್, ಪ್ಯಾಡಲ್ ಶಿಫ್ಟರ್‌ಗಳು, ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್, ಆನ್‌ಬೋರ್ಡ್ ನ್ಯಾವಿಗೇಷನ್ ಮತ್ತು ಹೆಚ್ಚಿನವು ಸೇರಿವೆ. ಇತರ ಗಮನಾರ್ಹ ವೈಶಿಷ್ಟ್ಯಗಳೆಂದರೆ 4.2-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, Apple CarPlay ಮತ್ತು Android Auto ಜೊತೆಗಿನ 8-ಇಂಚಿನ ಇನ್ಫೋಟೈನ್‌ಮೆಂಟ್ ಯೂನಿಟ್ ಅನ್ನು ಒಳಗೊಂಡಿದೆ.