ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ :ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ!

Twitter
Facebook
LinkedIn
WhatsApp
NALIN KUMAR KATEEL 1 1200x900 1

ಮಂಗಳೂರು: ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ದ್ವೇಷದ ರಾಜಕಾರಣವನ್ನು ವಿರೋಧಿಸಿ ಪ್ರತಿಭಟಿಸುತ್ತೇವೆ. ತಿಂಗಳ ಒಳಗೆ ಎಲ್ಲವೂ ಸರಿಯಾಗದಿದ್ದರೆ ಹೋರಾಟ ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel) ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ‘ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಗಳ ಪೂರ್ಣ ತನಿಖೆ ನಡೆಯಲಿ. ಸಿದ್ಧರಾಮಯ್ಯ ಮೇಲಿರುವ ಲೋಕಾಯುಕ್ತ ಕೇಸ್ ನ್ನೂ ತನಿಖೆ ಮಾಡಲಿ. ಕರಾವಳಿ ಜಿಲ್ಲೆಗೆ ಒಂದೂ ಮಂತ್ರಿ ಪಟ್ಟ ಇಲ್ಲ, ಈ ಬಗ್ಗೆ ಕೂಡ ದುಃಖ ಇದೆ ಎಂದಿದ್ದಾರೆ.

ಮಂಗಳೂರಿನಲ್ಲಿ ಜಿಲ್ಲೆಯ ಆರು ಬಿಜೆಪಿ ಶಾಸಕರೊಂದಿಗೆ ನಳಿನ್ ಕುಮಾರ್ ಕಟೀಲ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ‘ಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಸಮಸ್ಯೆಗೆ ಪರಿಹಾರ ಮಾಡುವ ಬದಲು ಅಧಿಕಾರ ಹಂಚಿಕೆಯ ಚರ್ಚೆಯಲ್ಲಿದೆ. ಐದು ಉಚಿತ ಯೋಜನೆಗಳನ್ನು 20 ದಿನಗಳಾದರೂ ಹಂಚಿಕೆ ಮಾಡಿಲ್ಲ. ಸರ್ಕಾರಿ ನೌಕರರು ಏಟು ತಿನ್ನುವ ಪರಿಸ್ಥಿತಿ ಬಂದಿದೆ. ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಹೋದವರಿಗೆ ಏಟು ಬೀಳುತ್ತಿದೆ. ಕಾಂಗ್ರೆಸ್ ವಿಜಯೋತ್ಸವದಲ್ಲೇ ಗಲಭೆ ಮಾಡಿದ್ದು, ದ್ವೇಷದ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ಮಾಡಲಾಗಿದೆ. ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರ ಮೇಲೂ ಕೇಸ್ ಹಾಕಲಾಗಿದೆ. ಕಾಂಗ್ರೆಸ್ ದ್ವೇಷ ಸಾಧನೆ ಮೂಲಕ ಬಿಜೆಪಿಯನ್ನು ಕಟ್ಟಿಹಾಕುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ಬಿಟ್ಟು ಹಲ್ಲೆ ಹತ್ಯೆ ಮಾಡುತ್ತಿದೆ. ಕಾಂಗ್ರೆಸ್ ನಲ್ಲಿ ತಾಕತ್ ಇದ್ರೆ, ಪಾಕ್ ಪರ ಜೈಕಾರ ಕೂಗಿದವರನ್ನು ಬಂಧಿಸಲಿ. ಪ್ರವೀಣ್ ನೆಟ್ಟಾರ್ ಪತ್ನಿಗೆ ನೀಡಿದ್ದ ಉದ್ಯೋಗ ವನ್ನು ಕಾಂಗ್ರೆಸ್ ಕಿತ್ತುಕೊಂಡಿದೆ. ಅನುಕಂಪದ ಆಧಾರದ ಮೇಲೆ ಮತ್ತೆ ಉದ್ಯೋಗ ನೀಡಿ ಎಂದು ಸಿಎಂ ಸಿದ್ಧರಾಮಯ್ಯಗೆ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದು, ನೀವು ಉದ್ಯೋಗ ನೀಡದಿದ್ದರೂ ಕೇಂದ್ರದ ಎನ್ಎಂಪಿಟಿಯಲ್ಲಿ ಉದ್ಯೋಗ ನೀಡುತ್ತೇವೆ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ