ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಗಾಟದ ಸಮಸ್ಯೆಗೆ ಪರಿಹಾರ ಒದಗಿಸಲು ಅಡುಗೆ ಅನಿಲದ ಸಿಲಿಂಡರ್​ಗಳ ತೂಕ ಇಳಿಸಲು ಸರ್ಕಾರದ ಚಿಂತನೆ!

Twitter
Facebook
LinkedIn
WhatsApp
ಸಾಗಾಟದ ಸಮಸ್ಯೆಗೆ ಪರಿಹಾರ ಒದಗಿಸಲು ಅಡುಗೆ ಅನಿಲದ ಸಿಲಿಂಡರ್​ಗಳ ತೂಕ ಇಳಿಸಲು ಸರ್ಕಾರದ ಚಿಂತನೆ!

ನವದೆಹಲಿ: ಎಲ್‌ಪಿಜಿ ಅಡುಗೆ ಸಿಲಿಂಡರ್ ತೂಕ ಕಡಿಮೆಯಾಗುವ ಸಾಧ್ಯತೆಯಿದೆ. ಈಗಿರುವ 14.2 ಕೆಜಿ ತೂಕದ ಎಲ್​ಪಿಜಿ ಸಿಲಿಂಡರ್‌ಗಳು ಭಾರವಾಗಿರುವುದರಿಂದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಲು ಕಷ್ಟವಾಗುತ್ತದೆ.

ಮುಖ್ಯವಾಗಿ ಮಹಿಳೆಯರು ಗ್ಯಾಸ್ ಸಿಲಿಂಡರ್ ಅನ್ನು ಒಂದು ಕಡೆಯಿಂದ ಮತ್ತೊಂದು ಕಡೆ ತೆಗೆದುಕೊಂಡು ಹೋಗಲು ತೊಂದರೆಯಾಗುತ್ತದೆ. ಹೀಗಾಗಿ, ಅದಕ್ಕೆ ಪರಿಹಾರವಾಗಿ ಗ್ಯಾಸ್​ ಸಿಲಿಂಡರ್​ಗಳ ತೂಕವನ್ನೇ ಕಡಿಮೆ ಮಾಡಲು ಕೇಂದ್ರ ಸರ್ಕಾರ ಯೋಚಿಸಿದೆ.

14.2 ಕೆಜಿ ತೂಕದ ಅಡುಗೆ ಅನಿಲದ ಸಿಲಿಂಡರ್​ಗಳನ್ನು ಸಾಗಾಟ ಮಾಡಲು ಕಷ್ಟವಾಗುತ್ತದೆ. ಇದರಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಎಲ್​ಪಿಜಿ ಸಿಲಿಂಡರ್​ಗಳ ತೂಕವನ್ನು ಕಡಿಮೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ರಾಜ್ಯಸಭೆ ಕಲಾಪದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಎಲ್​ಪಿಜಿ ಸಿಲಿಂಡರ್​ಗಳು ಭಾರವಾಗಿರುವುದರಿಂದ ಮಹಿಳೆಯರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಕಲಾಪದಲ್ಲಿ ರಾಜ್ಯಸಭೆ ಸದಸ್ಯರೊಬ್ಬರು ಪ್ರಸ್ತಾಪಿಸಿದಾಗ ಅದಕ್ಕೆ ಉತ್ತರ ನೀಡಿದ ಸಚಿವ ಹರ್ದೀಪ್ ಸಿಂಗ್ ಪುರಿ, ಮಹಿಳೆಯರು ಮತ್ತು ಹೆಣ್ಣುಮಕ್ಕಳು ಸಿಲಿಂಡರ್‌ನ (LPG) ಹೆಚ್ಚಿನ ತೂಕವನ್ನು ತಾವೇ ಹೊರುವುದು ನಮಗೆ ಇಷ್ಟವಿಲ್ಲ, ಹಾಗಾಗಿ ಅದರ ತೂಕವನ್ನು ಕಡಿಮೆ ಮಾಡುವ ಬಗ್ಗೆ ಚಿಂತಿಸಲಾಗುತ್ತಿದೆ’ ಎಂದು ಹೇಳಿದರು.

14.2 ಕೆ.ಜಿ ತೂಕವನ್ನು 5 ಕೆ.ಜಿ.ಗೆ ಇಳಿಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರವು ಎಲ್​ಪಿಜಿ ಸಿಲಿಂಡರ್​ನ ತೂಕವನ್ನು ಕಡಿಮೆ ಮಾಡಲು ವಿವಿಧ ಆಯ್ಕೆಗಳನ್ನು ಪರಿಗಣಿಸುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು