ಬೆಂಗಳೂರ: ಹಿಜಾಬ್ – ಕೇಸರಿ ಶಾಲು ವಿವಾದ ತಣ್ಣಗಾಗುವ ಸೂಚನೆ ಕಾಣುತ್ತಿಲ್ಲ, ಇದೀಗ ಈ ಸಂಘರ್ಷ ಸಿಂಧೂರು ಕುಂಕುಮಕ್ಕೂ ಕಾಲಿಟ್ಟಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ, ಶಿಕ್ಷಣ ಸಚಿವ ಬಿ ಸಿ ನಾಗೇಶ್ , “ಸಿಂಧೂರ, ಕುಂಕುಮ, ಬಳೆ ಬಗ್ಗೆ ಪ್ರಶ್ನೆ ಬೇಡ, ಅದು ನಮ್ಮ ಸಂಸ್ಕೃತಿಯ ಪ್ರತೀಕ, ಅಲಂಕಾರಿಕ ವಸ್ತು ಅದಕ್ಕೂ ಹಿಜಾಬ್’ಗೂ ಸಂಬಂಧವಿಲ್ಲ, ಅದನ್ನು ಧರಿಸಿ ಬಂದವರನ್ನು ಶಾಲೆ-ಕಾಲೇಜುಗಳಲ್ಲಿ ತಡೆದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.
“ಹಿಜಾಬ್ ಧಾರ್ಮಿಕ ಗುರುತನ್ನು ಸಂಕೇತಿಸುವ ಬಟ್ಟೆ, ಹಾಗೆಂದು ಬಿಂದಿ,ಸಿಂಧೂರ, ಕುಂಕುಮಗಳು ಅಲಂಕಾರಿಕ ವಸ್ತುಗಳನ್ನು ಧರಿಸಿ ಬಂದ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗೆ ನಿಲ್ಲಿಸಿದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದೇನೆ” ಎಂದು ಹೇಳಿದ್ದಾರೆ.
“ಅಲಂಕಾರಿಕ ವಸ್ತುಗಳನ್ನು ಸ್ವ ಇಚ್ಛೆಯಿಂದ ಹಾಕಿಕೊಂಡು ಬರುತ್ತಾರೆ ಅವುಗಳು ಕಡ್ದಾಯವಲ್ಲ . ಈ ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಗುವಂತೆ ತಡೆಯುವಂತಿಲ್ಲ” ಎಂದು ತಿಳಿಸಿದ್ದಾರೆ.
ನಿನ್ನೆ ವಿಜಯಪುರದ ಇಂಡಿ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ತಿಲಕ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ತರಗತಿಯೊಳಗೆ ಶಿಕ್ಷಕರು ಪ್ರವೇಶ ನಿರಾಕರಿಸಿದ್ದು ಭಾರೀ ಸುದ್ದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು ಈ ಆದೇಶ ನೀಡಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist