ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿದ್ದುಗೆ ಅಧಿಕಾರಕ್ಕಾಗಿ ನಮಾಜ್‌ ಆದ ಬಳಿಕ ಪ್ರಾರ್ಥಿಸಿ: ಜಮೀರ್‌ ಅಹಮ್ಮದ್‌

Twitter
Facebook
LinkedIn
WhatsApp
ಸಿದ್ದುಗೆ ಅಧಿಕಾರಕ್ಕಾಗಿ ನಮಾಜ್‌ ಆದ ಬಳಿಕ ಪ್ರಾರ್ಥಿಸಿ: ಜಮೀರ್‌ ಅಹಮ್ಮದ್‌

ದಾವಣಗೆರೆ/ಬೆಂಗಳೂರು(ಜು.27):  ರಾಜ್ಯದ 105 ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚು ಪ್ರಾಬಲ್ಯ ಹೊಂದಿರುವ ಮುಸ್ಲಿಮರು ಆ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಪರ ನಿಲ್ಲಬೇಕು, ನಮ್ಮ ಸಮುದಾಯದ ಪರ ಧ್ವನಿ ಎತ್ತುವ ಸಿದ್ದರಾಮಯ್ಯ ಸೇರಿದಂತೆ ಎಲ್ಲರಿಗೂ ಒಳ್ಳೆಯದಾಗಲಿ, ಅಧಿಕಾರ ಸಿಗಲಿ ಎಂಬುದಾಗಿ ಮುಸ್ಲಿಮರು ನಮಾಜ್‌ ನಂತರ ದುವಾ (ಬೇಡಿಕೆ) ಮಾಡಿ ಎಂದು ಮಾಜಿ ಸಚಿವ ಜಮೀರ್‌ ಅಹಮ್ಮದ್‌ ಕರೆ ನೀಡಿದರು.

ನಗರದ ತಾಜ್‌ ಪ್ಯಾಲೇಸ್‌ನಲ್ಲಿ ಮಂಗಳವಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದವರ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿ, ಟಿಪ್ಪು ಜಯಂತಿ ಬ್ಯಾನ್‌ ಮಾಡಿ ಅಂತಾ ಬಿಜೆಪಿ ಒತ್ತಾಯಿಸಿದಾಗ ಅದರ ವಿರುದ್ಧ ನಿಂತವರು ಸಿದ್ದರಾಮಯ್ಯ. ನೀವು ಏನು ಮಾಡುತ್ತೀರಾ, ಮಾಡಿಕೊಳ್ಳಿ. ನಾನು ಟಿಪ್ಪು ಜಯಂತಿ ಮಾಡೇ ಮಾಡ್ತೀನಿ ಎಂದಿದ್ದು ಇದೇ ಸಿದ್ದರಾಮಯ್ಯ. ಮುಸ್ಲಿಮರು ನಮಾಜ್‌ ಮಾಡಿದ ಬಳಿಕ, ಸಿದ್ದರಾಮಯ್ಯನವರಿಗೆ ಅಧಿಕಾರ ಸಿಗಲಿ ಅಂತಾ ದುವಾ ಮಾಡಬೇಕು ಎಂದು ಉರ್ದು ಭಾಷೆಯಲ್ಲಿ ತಿಳಿಸಿದರು.

ಮುಸ್ಲಿಮರು ತಲೆ ತಗ್ಗಿಸಿ ನಡೆಯದೇ, ತಲೆ ಎತ್ತಿ ಮುಂದೆ ಸಾಗಬೇಕು. 2008ರಲ್ಲಿ ನಾನು ಜೆಡಿಎಸ್‌ ತೊರೆದು, ಕಾಂಗ್ರೆಸ್ಸಿಗೆ ಬಂದಿದ್ದೆ. ನನಗೆ ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಿದ್ದು ಆಶ್ಚರ್ಯ ತಂದಿತ್ತು. ನನಗಿಂತ ಹಿರಿಯರಾದ ತನ್ವೀರ್‌ ಸೇಠ್‌, ಹ್ಯಾರಿಸ್‌ನಂತಹವರು ಕಾಂಗ್ರೆಸ್ಸಿನಲ್ಲಿದ್ದರು. ಪಕ್ಷದಲ್ಲಿ ಹಿರಿಯರು ಅನೇಕರಿದ್ದರೂ, ನನ್ನನ್ನು ಮಂತ್ರಿ ಮಾಡಿದರು. ಆಗ ರಣದೀಪ್‌ ಸುರ್ಜೇವಾಲ ಕರೆ ಮಾಡಿ ಮಾತನಾಡಿದ್ದರು. ಸುರ್ಜೇವಾಲ ಕರೆ ಮಾಡಿದ್ದು ನನ್ನ ಬಳಿ ಹಣ ಇದೆ ಅಂತಾ ಅಲ್ಲ, ನನ್ನ ಹಿಂದೆ ಮುಸ್ಲಿಂ ಸಮಾಜ ಇದೆಯೆಂದು ಕರೆ ಮಾಡಿ, ಮಾತನಾಡುತ್ತಾರೆ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ