ಶನಿವಾರ, ಮೇ 4, 2024
ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುರಂಗ ತೋಡಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ!

Twitter
Facebook
LinkedIn
WhatsApp
All about coconut tree 14

ಮೀರತ್(ಉತ್ತರಪ್ರದೇಶ): ಚರಂಡಿ ಮೂಲಕ ಹತ್ತು ಅಡಿ ಉದ್ದದ ಸುರಂಗ ಕೊರೆದು ಚಿನ್ನದ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿರುವ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಮಂಗಳವಾರ ಬೆಳಗ್ಗೆ ಜ್ಯುವೆಲ್ಲರಿ ಶೋರೂಂನ ಮಾಲೀಕರು ಬಾಗಿಲು ತೆರೆದ ನಂತರ ಚರಂಡಿ ಮೂಲಕ ಶೋರೂಂವರೆಗೆ ಸುರಂಗ ತೋಡಿರುವುದನ್ನು ಗಮನಿಸಿದ್ದರು. ಅಷ್ಟೇ ಅಲ್ಲ ಶೋರೂಂನಲ್ಲಿದ್ದ ಲಕ್ಷಾಂತರ ರೂಪಾಯಿ ಚಿನ್ನಾಭರಣ ಕೂಡಾ ಕಳವು ಮಾಡಲಾಗಿದೆ ಎಂಬುದು ಮನವರಿಕೆಯಾಗಿತ್ತು.

ಚರಂಡಿಯ ಗಡಿಯಲ್ಲಿ ದುರ್ಬಲಗೊಂಡಿದ್ದ ಇಟ್ಟಿಗೆ ಮತ್ತು ಮಣ್ಣನ್ನು ಅಗೆದು ಕಳ್ಳರು ಚಿನ್ನದ ಶೋರೂಂನೊಳಗೆ ಪ್ರವೇಶಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಲಕ್ಷಾಂತರ ರೂಪಾಯಿ ಚಿನ್ನಾಭರಣಗಳನ್ನು ಕಳ್ಳರು ಹೊತ್ತೊಯ್ದಿದ್ದು, ಅಂದಾಜು ಎಷ್ಟು ಮೌಲ್ಯದ ಚಿನ್ನಾಭರಣ ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದರೋಡೆ ಪ್ರಕರಣದ ಸುದ್ದಿ ಹರಡುತ್ತಿದ್ದಂತೆಯೇ ಮೀರತ್ ನ ಬುಲ್ಲಿಯನ್ ಟ್ರೇಡರ್ಸ್ ಅಸೋಸಿಯೇಶನ್ ಸದಸ್ಯರು ಶೋರೂಂಗೆ ಭೇಟಿ ನೀಡಿ, ನಗರದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಿರುವುದಾಗಿ ವರದಿ ವಿವರಿಸಿದೆ. ಇದು ಮೀರತ್ ನಗರದಲ್ಲಿ ನಡೆದ ನಾಲ್ಕನೇ ಕಳ್ಳತನ ಪ್ರಕರಣವಾಗಿದೆ ಎಂದು ಟ್ರೇಡರ್ಸ್ ಅಸೋಸಿಯೇಶನ್ ಆರೋಪಿಸಿದೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಶೋರೂಂನೊಳಗೆ ಪ್ರವೇಶಿಸಲು ಪ್ರತಿಭಟನಾಕಾರರು ತಡೆಯೊಡ್ಡಿ, ಆಕ್ರೋಶ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ