ಸುಳ್ಯ: ಕೂಲಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ
Twitter
Facebook
LinkedIn
WhatsApp
ಸುಳ್ಯ, ಜ 20: ಕೆಲ ದಿನಗಳ ಹಿಂದೆ ಮನೆಯಿಂದ ಕೂಲಿಕೆಲಸಕ್ಕೆಂದು ಹೋಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಗುರುವಾರ ಪಂಜ ಸಮೀಪದ ಬೆಳಕಿಗೆ ಬಂದಿದೆ.
ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ(70) ಶವವಾಗಿ ಪತ್ತೆಯಾದ ವ್ಯಕ್ತಿ. ಅವರು ಜ.16ರಂದು ಬೆಳಗ್ಗೆ ಎಂದಿನಂತೆ ಕೂಲಿ ಕೆಲಸಕ್ಕೆಂದು ಮನೆಯಿಂದ ತೆರಳಿದ್ದರು. ಬಳಿಕ ಅವರು ಮನೆಗೆ ಬಾರದೇ ಇದ್ದುದರಿಂದ ಮನೆಯವರು ಹುಟುಕಾಟ ವಿವಿಧೆಡೆ ಹುಡುಕಾಟ ನಡೆಸಿದ್ದರು.
ಜ.19 ಕೂತ್ಕುಂಜ ಗ್ರಾಮದ ಸಂಪ ಎಂಬಲ್ಲಿ ಬಾವಿಯಲ್ಲಿ ಅವರ ಶವ ಪತ್ತೆಯಾಗಿದೆ. ಮನೆಯವರು ಸ್ಥಳಕ್ಕೆ ಆಗಮಿಸಿ ಮೃತ ದೇಹ ಖಚಿತ ಪಡಿಸಿದರು. ಸುಬ್ರಹ್ಮಣ್ಯ ಪೋಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲಸ ಬಿಟ್ಟು ಮನೆಗೆ ಬರುವ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.