ಸುಳ್ಯ: ಜೇನು ತೆಗೆಯಲು ಮರಕ್ಕೆ ಹತ್ತಿದ ವ್ಯಕ್ತಿ- ಮರದಿಂದ ಬಿದ್ದು ಮೃತ್ಯು!
Twitter
Facebook
LinkedIn
WhatsApp
ಸುಳ್ಯ;ಯುವಕನೋರ್ವ ಮರದಿಂದ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಸಂಪಾಜೆಯಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಕರಿಕೆ ಮೂಲದ ವಿಜಯ್ ಗುರುತಿಸಲಾಗಿದೆ.
ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ ಬಂದಿದ್ದರು.ಸಂಪಾಜೆಯಲ್ಲಿ ಜೇನು ತೆಗೆಯುತ್ತಿದ್ದ ಸಂದರ್ಭ ವಿಜಯ್ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು.
ಕೂಡಲೇ ಜೊತೆಗಿದ್ದವರು ಆತನನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರಾದರೂ ಆ ವೇಳೆಗೆ ಮೃತಪ್ಪಟ್ಟನೆಂದು ತಿಳಿದು ಬಂದಿದೆ.
ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.