ಸೆಲ್ಫಿ ನಿರಾಕರಿಸಿದ್ದಕ್ಕೆ ಕ್ರಿಕೆಟಿಗ ಪೃಥ್ವಿ ಶಾ ಮೇಲೆ ದಾಳಿ
ಭಾರತ ಕ್ರಿಕೆಟ್ ತಂಡದ ಆಟಗಾರ ಪೃಥ್ವಿ ಶಾ ಅವರ ಕಾರಿನ ಮೇಲೆ ದಾಳಿ ನಡೆದಿದೆ. ಅಪರಿಚಿತ ವ್ಯಕ್ತಿಗಳು ಮುಂಬೈನಲ್ಲಿ ಪ್ರಥ್ವಿ ಶಾ ಕಾರಿನ ಮೇಲೆ ದಾಳಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಸೆಲ್ಫಿ ತೆಗೆದುಕೊಳ್ಳಲು ನಿರಾಕರಿಸಿದ ಹಿನ್ನೆಲೆಯಲ್ಲಿ ಎಂಟು ಜನರ ಗುಂಪು ಪೃಥ್ವಿ ಶಾ ಅವರ ಕಾರಿನ ಮೇಲೆ ಬೇಸ್‌ಬಾಲ್ ಬ್ಯಾಟ್‌ಗಳಿಂದ ದಾಳಿ ಮಾಡಿದೆ. ಮುಂಬೈನ ಓಶಿವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪೃಥ್ವಿ ಶಾ ತಮ್ಮ ಸ್ನೇಹಿತನ ಕಾರಿನಲ್ಲಿ ಕುಳಿತಿದ್ದರು. ಆ ವೇಳೆ ಪೃಥ್ವಿ ಶಾ ಜೊತೆ ಸೆಲ್ಫಿ ತೆಗೆದುಕೊಳ್ಳಲು ಕೆಲವರು ಅಲ್ಲಿಗೆ ಬಂದಿದ್ದರು. ಆದರೆ ಪೃಥ್ವಿ ಶಾ ನಿರಾಕರಿಸಿದಾಗ ಸಿಟ್ಟಿನಿಂದ ಪೃಥ್ವಿ ಶಾ ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಈ ಸಂಬಂಧ ಪೃಥ್ವಿ ಶಾ ಓಶಿವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಾಹಿತಿಯ ಪ್ರಕಾರ ಸನಾ ಗಿಲ್ ಮತ್ತು ಶೋಭಿತ್ ಠಾಕೂರ್ ಎಂಬ ವ್ಯಕ್ತಿಗಳು ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಮುಂಬೈನ ವಿಲೇ ಪಾರ್ಲೆ ಪ್ರದೇಶದಲ್ಲಿ ಫೆಬ್ರವರಿ 15ರ ರಾತ್ರಿ ಈ ಘಟನೆ ನಡೆದಿದೆ. ಪೃಥ್ವಿ ಶಾ ಸೆಲ್ಫಿ ತೆಗೆದುಕೊಳ್ಳಲು ನಿರಾಕರಿಸಿದ ನಂತರ ವಿವಾದ ಹುಟ್ಟಿಕೊಂಡಿದೆ ಎಂದು ವರದಿಯಾಗಿದೆ.