ಶನಿವಾರ, ಜನವರಿ 11, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸೋಲಿನ ಬಳಿಕ ಸ್ಟೇಡಿಯಮ್ ನಲ್ಲಿ ಬಿಕ್ಕಳಿಸಿ ಕಣ್ಣೀರಿಟ್ಟ ಕಾವ್ಯ ಮಾರನ್ ; ಇಲ್ಲಿದೆ ವಿಡಿಯೋ

Twitter
Facebook
LinkedIn
WhatsApp
ಸೋಲಿನ ಬಳಿಕ ಸ್ಟೇಡಿಯಮ್ ನಲ್ಲಿ ಬಿಕ್ಕಳಿಸಿ ಕಣ್ಣೀರಿಟ್ಟ ಕಾವ್ಯ ಮಾರನ್ ; ಇಲ್ಲಿದೆ ವಿಡಿಯೋ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಭರ್ಜರಿ ಜಯ ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಎಸ್​ಆರ್​ಹೆಚ್​ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿ ಕೆಕೆಆರ್ 3ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಹೆಚ್ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಸನ್​ರೈಸರ್ಸ್ ಹೈದರಾಬಾದ್​ ತಂಡಕ್ಕೆ ಮೊದಲ ಓವರ್​ನಲ್ಲೇ ಮಿಚೆಲ್ ಸ್ಟಾರ್ಕ್ ಆಘಾತ ನೀಡಿದ್ದರು.

ಮೊದಲ ಓವರ್​ನ 5ನೇ ಎಸೆತದಲ್ಲಿ ಅಭಿಷೇಕ್ ಶರ್ಮಾ (2) ರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಸ್ಟಾರ್ಕ್ ಶುಭಾರಂಭ ಮಾಡಿದ್ದರು. ಇದಾದ ಬಳಿಕ ಟ್ರಾವಿಸ್ ಹೆಡ್ (0) ವೈಭವ್ ಅರೋರಾಗೆ ವಿಕೆಟ್ ಒಪ್ಪಿಸಿದರು. ಪವರ್​ಪ್ಲೇನಲ್ಲೇ ಪ್ರಮುಖ 2 ವಿಕೆಟ್ ಕಳೆದುಕೊಂಡ ಸನ್​ರೈಸರ್ಸ್ ಹೈದರಾಬಾದ್ ಈ ಆಘಾತದಿಂದ ಪಾರಾಗುವ ಮುನ್ನವೇ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡವು 18.3 ಓವರ್​ಗಳಲ್ಲಿ 113 ರನ್​ಗಳಿಸಿ ಆಲೌಟ್ ಆಯಿತು.​

114 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿತು. 2ನೇ ಓವರ್​ನಲ್ಲಿ ಸುನಿಲ್ ನರೈನ್ (6) ವಿಕೆಟ್ ಕಳೆದುಕೊಂಡರೂ, ರಹಮಾನುಲ್ಲಾ ಗುರ್ಬಾಝ್ (39) ಹಾಗೂ ವೆಂಕಟೇಶ್ ಅಯ್ಯರ್ (52) ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಕೆಕೆಆರ್ ತಂಡವು 10.3 ಓವರ್​ಗಳಲ್ಲಿ 114 ರನ್​ ಬಾರಿಸಿ ಗೆಲುವಿನ ನಗೆ ಬೀರಿದರು.

ಅತ್ತ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಗೆಲುವಿನ ನಗೆ ಬೀರುತ್ತಿದ್ದರೆ, ಇತ್ತ ಸನ್​ರೈಸರ್ಸ್ ಹೈದರಾಬಾದ್ ತಂಡ ಮಾಲಕಿ ಕಾವ್ಯ ಮಾರನ್ ಬಿಕ್ಕಳಿಸಿ ಅಳುತ್ತಿರುವ ದೃಶ್ಯ ಕಂಡು ಬಂತು. ಸೋಲಿನ ನೋವನ್ನು ಅದುಮಿಟ್ಟುಕೊಳ್ಳಲಾಗದೇ ಕಣ್ಣೀರು ಸುರಿಸಿದರು. ಇದೀಗ ಎಸ್​ಆರ್​ಹೆಚ್​ ಮಾಲಕಿಯ ಕಣ್ಣೀರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕೊಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ 11: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್) , ಸುನಿಲ್ ನರೈನ್ , ವೆಂಕಟೇಶ್ ಅಯ್ಯರ್ , ಶ್ರೇಯಸ್ ಅಯ್ಯರ್ (ನಾಯಕ) , ರಿಂಕು ಸಿಂಗ್ , ಆಂಡ್ರೆ ರಸೆಲ್ , ರಮಣ್​ದೀಪ್ ಸಿಂಗ್ , ಮಿಚೆಲ್ ಸ್ಟಾರ್ಕ್ , ವೈಭವ್ ಅರೋರಾ , ​​ಹರ್ಷಿತ್ ರಾಣಾ , ವರುಣ್ ಚಕ್ರವರ್ತಿ.

ಸನ್​ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11: ಟ್ರಾವಿಸ್ ಹೆಡ್ , ಅಭಿಷೇಕ್ ಶರ್ಮಾ , ರಾಹುಲ್ ತ್ರಿಪಾಠಿ , ಐಡೆನ್ ಮಾರ್ಕ್ರಾಮ್ , ನಿತೀಶ್ ರೆಡ್ಡಿ , ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್) , ಶಹಬಾಝ್ ಅಹ್ಮದ್ , ಪ್ಯಾಟ್ ಕಮಿನ್ಸ್ (ನಾಯಕ) , ಭುವನೇಶ್ವರ್ ಕುಮಾರ್ , ಜಯದೇವ್ ಉನಾದ್ಕತ್ , ಟಿ ನಟರಾಜನ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist