ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸ್ಮಾರ್ಟ್​ಫೋನ್ ಮಾರುಕಟ್ಟೆ ಶಾಕ್: ಕೇವಲ 12,990 ರೂ. ಗೆ ಹೊಸ 5G ಫೋನ್ ರಿಲೀಸ್ ಮಾಡಿದ ಸ್ಯಾಮ್​ಸಂಗ್

Twitter
Facebook
LinkedIn
WhatsApp
amit shah 0116307512631660060556 1

ಭಾರತದಲ್ಲಿ 5ಜಿ ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಯೋ, ಏರ್ಟೆಲ್ 5ಜಿ (Airtel 5G) ಸೇವೆ ಆರಂಭಿಸಿದ್ದೆ ತಡ ಪ್ರಸಿದ್ಧ ಸ್ಮಾರ್ಟ್​ಫೋನ್ ಬ್ರ್ಯಾಂಡ್​ಗಳು ಒಂದರ ಹಿಂದೆ ಒಂದರಂತೆ 5ಜಿ ಬೆಂಬಲ ನೀಡುವ ಮೊಬೈಲ್ (Mobile) ಅನ್ನು ರಿಲೀಸ್ ಮಾಡುತ್ತಿದೆ. ಅದುಕೂಡ ಬಜೆಟ್ ಬೆಲೆಗೆ ಎಂಬುದು ವಿಶೇಷ. ಇದೀಗ ಸ್ಯಾಮ್​ಸಂಗ್ ಕಂಪನಿ ಅಚ್ಚರಿ ಎಂಬಂತೆ ಅತ್ಯಂತ ಕಡಿಮೆ ಬೆಲೆಗೆ ಭಾರತದಲ್ಲಿ ನೂತನ 5ಜಿ ಮೊಬೈಲ್ ಅನಾವರಣ ಮಾಡಿದೆ. ಅದುವೇ ಸ್ಯಾಮ್​ಸಂಗ್ ಗ್ಯಾಲಕ್ಸಿ ಎಫ್ 14 5ಜಿ (Samsung Galaxy F14 5G). ಬಲಿಷ್ಠ ಬ್ಯಾಟರಿ, ಆಕರ್ಷಕ ಕ್ಯಾಮೆರಾ, ಅತ್ಯುತ್ತಮ ಪ್ರೊಸೆಸರ್​ನಿಂದ ಈ ಫೋನ್ ಆವೃತ್ತವಾಗಿದೆ. ಹಾಗಾದರೆ ಇದರ ಬೆಲೆ ಎಷ್ಟು?, ದೇಶದಲ್ಲಿ ಯಾವಾಗಿನಿಂದ ಖರೀದಿಗೆ ಲಭ್ಯವಿದೆ ಎಂಬುದನ್ನು ನೋಡೋಣ.

Samsung to launch Galaxy F14 5G in India on March 24 with 6000mAh battery,  Exynos 1330, and more | The Financial Express

ಬೆಲೆ ಎಷ್ಟು?:

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F14 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಆಗಿದೆ. ಇದರ 4GB RAM + 128GB ರೂಪಾಂತರದ ಆಯ್ಕೆಗೆ 14,490 ರೂ. ಇದೆ. ಅಂತೆಯೆ 6GB RAM + 128GB ಆಯ್ಕೆಗೆ 15,990 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಸೇರಿದಂತೆ ಸ್ಯಾಮ್​ಸಂಗ್​ನ ಅಧಿಕೃತ ವೆಬ್​ಸೈಟ್​ನಲ್ಲಿ ಇದೇ ಮಾರ್ಚ್ 30 ರಿಂದ ಖರೀದಿಗೆ ಸಿಗಲಿದೆ. ಮೊದಲ ಸೇಲ್ ಪ್ರಯುಕ್ತ ಆಫರ್ ಕೂಡ ಘೋಷಣೆ ಮಾಡಲಾಗಿದ್ದು, HDFC ಬ್ಯಾಂಕ್ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಖರೀದಿ ಮಾಡಿದರೆ 1,500 ರೂ. ಗಳ ಡಿಸ್ಕೌಂಟ್ ಸಿಗಲಿದೆ. ಈ ಮೂಲಕ ಈ ಫೋನಿನ 4GB RAM ಆಯ್ಕೆಯನ್ನು ಕೇವಲ 12,990 ರೂ. ಗೆ ನಿಮ್ಮದಾಗಿಸಬಹುದು.

Galaxy F14 5G - Battery, Features & Specs | Samsung India

ಏನು ಫೀಚರ್ಸ್?:

ಈ ಸ್ಮಾರ್ಟ್​ಫೋನ್ F14 5G ಸ್ಮಾರ್ಟ್‌ಫೋನ್ 2408*1080 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ ಹೆಚ್‌ಡಿ+ ಐಪಿಎಸ್ ಎಲ್​ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ. ಗೋರಿಲ್ಲ ಗ್ಲಾಸ್ 5 ಪ್ರೊಟೆಕ್ಷನ್ ಪಡೆದುಕೊಂಡಿದ್ದು, ಡಿಸ್ ಪ್ಲೇ ಅತ್ಯುತ್ತಮ ಅನುಭವ ನೀಡುತ್ತದೆ. ಆಕ್ಟಾ-ಕೋರ್ Exynos 1330 ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F14 5G ಸ್ಮಾರ್ಟ್‌ಫೋನ್‌ ಟ್ರಿಪಲ್-ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಹಿಂಭಾಗದ ಕ್ಯಾಮೆರಾ ಜೊತೆ ಎಲ್​ಇಡಿ ಫ್ಲ್ಯಾಶ್ ನೀಡಲಾಗಿದೆ.

Frevolutionary Clicks

ಈ ಸ್ಮಾರ್ಟ್‌ಫೋನ್​ನ ಪ್ರಮುಖ ಹೈಲೇಟ್ ಆಗಿರುವ ಬ್ಯಾಟರಿಯು 6000mAh ಸಾಮರ್ಥ್ಯದಿಂದ ಕೂಡಿದೆ. 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಅನ್ನು ಹೊಂದಿದ್ದು, 5G, 4G, Wi-Fi, ಬ್ಲೂಟೂತ್, NFC ಮತ್ತು GPS ಕನೆಕ್ಟಿವಿಟಿ ಆಯ್ಕೆಯನ್ನು ನೀಡಲಾಗಿದೆ. ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಕೆಲವೇ ಕೆಲವು 5G ಸ್ಮಾರ್ಟ್​ಫೋನ್​ಗಳ ಸಾಲಿಗೆ ಇದುಕೂಡ ಸೇರ್ಪಡೆ ಆಗಿದ್ದು ಬಜೆಟ್ ಪ್ರಿಯರು ಫಿದಾ ಆಗುವುದು ಖಚಿತ.

Frevolutionary Space

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist