ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ವಾತಂತ್ರ್ಯದ ಅಮೃತ ಮೋತ್ಸವಕ್ಕೆ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ಹಾರಲಿದೆ ತ್ರಿವರ್ಣ ಧ್ವಜ

Twitter
Facebook
LinkedIn
WhatsApp
ಸ್ವಾತಂತ್ರ್ಯದ ಅಮೃತ ಮೋತ್ಸವಕ್ಕೆ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ಹಾರಲಿದೆ ತ್ರಿವರ್ಣ ಧ್ವಜ

ನವದೆಹಲಿ: ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ಹರ್ ಘರ್ ತಿರಂಗಾ(ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ) ಅಭಿಯಾನವನ್ನು ಪ್ರಾರಂಭಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದ್ದು, ದೇಶಾದ್ಯಂತ ಬರೋಬ್ಬರಿ 20 ಕೋಟಿ ಮನೆಗಳ ಮೇಲೆ ಧ್ವಜವನ್ನು ಹಾರಿಸಲು ಸಿದ್ಧತೆ ನಡೆಸಲಾಗುತ್ತಿದೆ.

ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ಮುಂದಿನ ತಿಂಗಳು 3 ದಿನಗಳ ಕಾಲ ದೇಶಾದ್ಯಂತ 20 ಕೋಟಿಗೂ ಹೆಚ್ಚು ಮನೆಗಳ ಮೇಲೆ ತ್ವಿವರ್ಣ ಧ್ವಜವನ್ನು ಹಾರಿಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.

ಈ ಅಭಿಯಾನವನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಡಿಯಲ್ಲಿ ಪ್ರಾರಂಭಿಸಲಾಗುತ್ತಿದ್ದು, ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಾರರೊಂದಿಗೆ ಸಿದ್ಧತೆಗಳು ನಡೆಯುತ್ತಿವೆ.

ಕಾರ್ಯಕ್ರಮದ ಭಾಗವಾಗಿ ಸಾರ್ವಜನಿಕ ಸಹಭಾಗಿತ್ವದ ಮೂಲಕ ಆಗಸ್ಟ್ 13 ರಿಂದ 15 ರವರೆಗೆ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲಾಗುವುದು. ಈ ಅಭಿಯಾನದಲ್ಲಿ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳೂ ಭಾಗಿಯಾಗಲಿವೆ ಎಂದು ಕೇಂದ್ರದ ಅಧಿಕೃತ ವರದಿ ತಿಳಿಸಿದೆ.

2022ರ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಜುಲೈ 22 ರಿಂದ ಎಲ್ಲಾ ರಾಜ್ಯ ಸರ್ಕಾರದ ವೆಬ್‌ಸೈಟ್ ಮುಖಪುಟಗಳಲ್ಲಿ ರಾಷ್ಟ್ರಧ್ವಜ ಕಾಣಿಸಿಕೊಳ್ಳಬೇಕು. ನಾಗರಿಕರೂ ತಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಟ್ವಿಟ್ಟರ್ ಹಾಗೂ ಇತರ ಸಾಮಾಜಿಕ ಮಾಧ್ಯಮಗಳ ಖಾತೆಗಳಲ್ಲಿ ತ್ರಿವರ್ಣ ಧ್ವಜಗಳನ್ನು ಪ್ರದರ್ಶಿಸುವ ಮೂಲಕ ಪ್ರೋತ್ಸಾಹ ನೀಡಬೇಕು ಎಂದು ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.

ತ್ರಿವರ್ಣ ಧ್ವಜದೊಂದಿಗಿನ ಫೋಟೋಗಳನ್ನು ತೆಗೆದುಕೊಂಡು ಸಂಸ್ಕೃತಿ ಸಚಿವಾಲಯದ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲು ಜನರನ್ನು ಪ್ರೋತ್ಸಾಹಿಸಲಾಗುತ್ತಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಈ ವರ್ಷದ ಸ್ವಾತಂತ್ರ್ಯದ ಅಮೃತ ಮೋತ್ಸವವನ್ನು ಹೊಸ ರೀತಿಯಲ್ಲಿ ಆಚರಿಸಲು ನಿರ್ಧರಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. 

ಹರ್ ಘರ್ ತಿರಂಗಾ ಅಭಿಯಾನದ ಉದ್ದೇಶ ದೇಶಭಕ್ತಿಯ ಮನೋಭಾವವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವುದು. ಜನರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದ ಮೂಲಕ ಅಭಿಯಾನವನ್ನು ಯಶಸ್ಸಿನತ್ತ ಕೊಂಡೊಯ್ಯಲಾಗುವುದು ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ