ಶನಿವಾರ, ಮೇ 4, 2024
ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಂಸಲೇಖ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು.

Twitter
Facebook
LinkedIn
WhatsApp
ಹಂಸಲೇಖ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು.

ಬೆಂಗಳೂರು : ಮೈಸೂರಿನ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಾದ ಸೃಷ್ಟಿಸಿದ ಸಂಗೀತ ನಿರ್ದೇಶಕ ಹಂಸಲೇಖ ಮತ್ತೆ ಸಂಕಷ್ಟಕ್ಕೆ ಗುರಿಯಾಗಿದ್ದು, ಹಂಸಲೇಖರಿಂದ ಬಹಿರಂಗ ಕ್ಷಮೆಯಾಚನೆಗೆ ಆಗ್ರಹಿಸಿ ಅಖಿಲ್ ಭಾರತ ಬ್ರಾಹ್ಮಣ ಸಮಾಜ ಪೊಲೀಸ್‌ ಕಮಿಷನರ್ ಕಚೇರಿ ಮೆಟ್ಟಿಲೇರಿದ್ದಾರೆ. ಪೇಜಾವರ ಶ್ರೀಗಳು ದಲಿತರ ಮನೆಗೆ ಹೋಗಿ ಕುಳಿತು ಬರುತ್ತಿದ್ದರಷ್ಟೇ, ದಲಿತರ ಮನೆಯಲ್ಲಿ ಕೋಳಿ ಕೊಟ್ಟರೇ ತಿನ್ನಲಿಕ್ಕಾಗುತ್ತದೆಯೇ ಎಂಬುದನ್ನು ಸೇರಿದಂತೆ ಅವಹೇಳನಕಾರಿ ಯಾಗಿ ಮಾತನಾಡಿದ್ದರು.

ಈ ಹಿನ್ನೆಲೆಯಲ್ಲಿ ಹಂಸಲೇಖ ವಿರುದ್ದ ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.‌ಬಳಿಕ ಎಚ್ಚೆತ್ತ ಹಂಸಲೇಖ ಕ್ಷಮೆಕೋರಿದ್ದರು. ಆದರೂ ಹಂಸಲೇಖ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸಿ ಹನುಮಂತ ನಗರ ಪೊಲೀಸ್ ಠಾಣೆಗೆ ಪೇಜಾವರ ಶ್ರೀಗಳ ಭಕ್ತರು ದೂರು ನೀಡಿದ್ದರು. ಇದೀಗ ಹಂಸಲೇಖ ವಿರುದ್ಧ ಅಖಿಲ ಭಾರತ ಬ್ರಾಹ್ಮಣ ಸಮಾಜದ ಉಪಾಧ್ಯಕ್ಷ ಕೃಷ್ಣ ದೂರು ನೀಡಿದ್ದು, ವಿದ್ಯಾಪೀಠ ಸರ್ಕಲ್‌ನಲ್ಲಿರುವ ಪೇಜಾವರಶ್ರೀಗಳ ಬೃಂದಾವನದ ಎದುರು ಹಂಸಲೇಖ ಕ್ಷಮೆ ಕೇಳಬೇಕು ಎಂದು ಸಮಾಜದ ಸದಸ್ಯರು ಆಗ್ರಹಿಸಿದ್ದಾರೆ.

ತುಂಬಿದ ಸಭೆಯಲ್ಲಿ ಮಾತನಾಡಿ ಈಗ ನಾಲ್ಕು ಗೋಡೆ ಮಧ್ಯೆ ಕ್ಷಮೆ ಕೇಳುವುದಲ್ಲ. ಪೇಜಾವರ ಶ್ರೀಗಳ ಬೃಂದಾವನದ ಎದುರು ಕ್ಷಮೆ ಕೇಳಬೇಕು. ಇಲ್ಲದಿದ್ದರೇ ರಸ್ತೆಗಿಳಿದು ಹೋರಾಟ ಮಾಡುವುದಾಗಿ ಸಮಾಜದ ಉಪಾಧ್ಯಕ್ಷ ಕೃಷ್ಣ ಅವರು ಎಚ್ಚರಿಸಿದ್ದಾರೆ. ದಾರಿಯಲ್ಲಿ ಚಪ್ಪಲಿ ಯಲ್ಲಿ ಹೊಡೆದು ಬಳಿಕ ಎಲ್ಲೋ ಕ್ಷಮೆ ಕೇಳೋದು ಸರಿಯಲ್ಲ. ಎಲ್ಲಿ ಅವಮಾನ ಮಾಡಿದ್ದಾರೋ ಅಲ್ಲೆ ಕ್ಷಮೆಕೇಳಬೇಕೆಂದು ಅಖಿಲ ಭಾರತ ಬ್ರಾಹ್ಮಣ ಸಮಾಜ ಆಗ್ರಹಿಸಿದೆ.

ಸೋಷಿಯಲ್ ಮೀಡಿಯಾ ದಲ್ಲೂ ಹಂಸಲೇಖ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು ಹಂಸಲೇಖ ಅವರು ಪೇಜಾವರ ಶ್ರೀಗಳ ಅಪಾರ ಭಕ್ತವೃಂದದ ಆಕ್ರೋಶಕ್ಕೂ ಗುರಿಯಾಗಿದ್ದಾರೆ. ಉಡುಪಿಯ ಪೇಜಾವರ ಮಠದ ಕಿರಿಯ ಶ್ರೀಗಳು ಕೂಡ ಹಂಸಲೇಖ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು