ಕೊಪ್ಪಳ: ಇಸ್ಪೀಟ್ (Playing Cards) ಆಟ ಆಡಿಸುವ ಗುಂಪುಗಳ ನಡುವೆ ಮತ್ತೆ ಮಾರಾಮಾರಿ ನಡೆದ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ (Koppala) ಜಿಲ್ಲೆಯ ಗಂಗಾವತಿ (Gangavathi) ನಗರದ ಸಿಂಧನೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಹಾಡುಹಗಲೇ ನಡುರಸ್ತೆಯಲ್ಲಿ ಯುವಕನ ಮೇಲೆ ಗುಂಪೊಂದು ದಾಳಿ ಮಾಡಿ, ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ್ದಾರೆ. ಗಂಗಾವತಿಯ ಅಮರಭಗತ್ ಸಿಂಗ್ ನಗರದ ಮಾರುತಿ ಕೊಲೆ ಯತ್ನಕ್ಕೆ ಒಳಗಾದ ಯುವಕ. ಆತನ ಸ್ಥಿತಿ ಚಿಂತಾಜನಕವಾಗಿದ್ದು, ಹುಬ್ಬಳ್ಳಿಯ (Hubballi) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.