ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಸ್ಟೆಲ್‌ನಲ್ಲೇ ನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Twitter
Facebook
LinkedIn
WhatsApp
pti03 04 2023 000213a sixteen nine 1

ದಾವಣಗೆರೆ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು (PUC Student) ಹಾಸ್ಟೆಲಿನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ.

ವರ್ಷಿತಾ (18) ಮೃತ ವಿದ್ಯಾರ್ಥಿನಿ. ವರ್ಷಿತಾ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಹರಿಹರ ಪಟ್ಟಣದ ಅಂಬೇಡ್ಕರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವರ್ಷಿತಾ ಮೂಲತಃ ಮಾಯಕೊಂಡ ಹೋಬಳಿಯ ಬಸಾಪುರ ಗ್ರಾಮದ ಯುವತಿ. ಪೋಷಕರು ಬಡತನದಲ್ಲಿ ಇದ್ದು ಕೂಲಿ ನಾಲಿ ಮಾಡಿ ಜೀವನ ನಡೆಸುತ್ತಿದ್ದರು. ಹಾಗಾಗಿ ವರ್ಷಿತಾ ಹಾಸ್ಟೆಲಿನಲ್ಲಿ ಇದ್ದುಕೊಂಡೇ ಓದುತ್ತಿದ್ದಳು. ಸದ್ಯ ಹರಿಹರದ ಪಟ್ಟಣದ ಅಂಬೇಡ್ಕರ್ ಕಾಲೇಜಿನಲ್ಲಿ ಪಿಯುಸಿ ಓದುತ್ತಾ, ಸ್ನೇಹಿತೆಯರೊಂದಿಗೆ ಸರ್ಕಾರಿ ಮೆಟ್ರಿಕ್ ನಂತರದ ಹಾಸ್ಟೆಲಿನಲ್ಲಿ (Government Hostel) ಉಳಿದುಕೊಂಡಿದ್ದಳು.

pti03 04 2023 000213a sixteen nine 2

ಮಂಗಳವಾರ ಬೆಳಗ್ಗೆ ಸ್ನೇಹಿತೆಯರ ಜೊತೆ ಪರೀಕ್ಷೆಗೆಂದು ಓದಿಕೊಳ್ಳುತ್ತಿದ್ದಳು. ನಂತರ ಅಂಗಡಿಯಿಂದ ಅಗತ್ಯ ಸಾಮಗ್ರಿಗಳನ್ನ ಖರೀದಿಸಿ ಮತ್ತೆ ಹಾಸ್ಟೆಲ್‌ಗೆ ವಾಪಸ್ಸಾಗಿದ್ದಳು. ನಂತರ ತನಗೆ ಪಾನಿಪುರಿ ತರುವಂತೆ ಸ್ನೇಹಿತೆಯರಿಗೆ ಹೇಳಿ ಹಾಸ್ಟೆಲ್‌ನ ರೂಮ್‌ಗೆ ಹೋಗಿದ್ದಾಳೆ. ಪಾನಿಪುರಿ ತಂದು ಸ್ನೇಹಿತೆಯರು ಆಕೆಯನ್ನ ಕೂಗಿದ್ದಾರೆ. ರೂಮ್ ಬಾಗಿಲು ಬಡಿದಿದ್ದಾರೆ. ಎಷ್ಟು ಕೂಗಿದರೂ ಬಾಗಿಲು ತೆರೆಯದೇ ಇದ್ದಾಗ ಕಿಟಿಕಿಯಲ್ಲಿ ನೋಡಿದ್ದಾರೆ. ಈ ವೇಳೆ ವರ್ಷಿತಾ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದನ್ನು ನೋಡಿ ಶಾಕ್ ಆಗಿದ್ದಾರೆ. ಬಳಿಕ ವಾರ್ಡನ್‌ಗೆ ವಿಷಯ ತಿಳಿಸಿದ್ದಾರೆ.

ವರ್ಷಿತಾ ಪ್ರತಿಭಾನ್ವಿತ ವಿದ್ಯಾರ್ಥಿನಿ, ಆದ್ರೆ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅನ್ನೋದು ಅಸ್ಪಷ್ಟವಾಗಿದೆ. ಸದ್ಯಕ್ಕೆ ಅದೇ ಕಾಲೇಜಿನಲ್ಲಿ ಯುವಕನೊಬ್ಬ ಈಕೆಯನ್ನ ಪ್ರೀತಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಕೇಸ್ ದಾಖಲಿಸಿಕೊಂಡಿರುವ ಹರಿಹರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ನಡುವೆ ಪೋಷಕರು ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿ ನನ್ನ ಮಗಳಿಗೆ ಕಿರಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ