ಶನಿವಾರ, ಜನವರಿ 11, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ

Twitter
Facebook
LinkedIn
WhatsApp
ಪಂಚಮಸಾಲಿ ಮೀಸಲಾತಿ ಹೋರಾಟ

ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ

ಬೆಳಗಾವಿ: 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದ ನಡೆಸಿದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನೆಕಾರುರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಹೋರಾಟಗಾರರನ್ನು ತಡೆಯಲು ಲಾಠಿ ಚಾರ್ಜ್ ಮಾಡಿದ್ದಾರೆ. ಇದರಿಂದ ಮತ್ತಷ್ಟು ರೊಚ್ಚಿಗೆದ್ದ ಜನರು ಪೊಲೀಸರ ಮೇಲೆಯೇ ಕಲ್ಲು, ಚಪ್ಪಲಿ ತೂರಿ ಆಕ್ರೋಶ ಹೊರಕಿದರು. ಈ ಘಟನೆಯಲ್ಲಿ ಪೊಲೀಸರು ಹಾಗೂ ಪ್ರತಿಭಟನೆಕಾರರಿಗೆ ಗಾಯಗಳಾಗಿವೆ. ಇದರಿಂದ ಸುವರ್ಣಸೌಧ ಮುಂಭಾಗ ಭಾರೀ ಹೈಡ್ರಾಮಾ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಇನ್ನು ಈ ಸಂಬಂಧ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಪೊಲೀಸರು ಹಾಗೂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 

ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧದ ಸುತ್ತ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿದ್ದರು. ಪ್ರತಿಭಟನೆಕಾರರು ಬ್ಯಾರಿಕೇಡ್​ಗಳನ್ನು ತಳ್ಳಿ ಸುವರ್ಣ ಸೌಧಕ್ಕೆ ನುಗ್ಗಲು ಯತ್ನಿಸಿದರು. ಇದರಿಂದ ಸುವರ್ಣಸೌಧ ಮುಂಭಾಗ ಭಾರೀ ಹೈಡ್ರಾಮಾ ಸೃಷ್ಟಿಯಾಗಿದ್ದು, ಪೊಲೀಸರಿಗೆ ಹಾಗೂ ಪ್ರತಿಭಟನೆಕಾರರಿಗೆ ಗಾಯಗಳಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಬಸವ ಜಯ ಮೃತ್ಯುಂಜಯ ಸ್ವಾಮಿ ನೇತೃತ್ವದಲ್ಲಿ ಪಂಚಮಸಾಲಿ ಸಮಾಜ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಟ್ರ್ಯಾಕ್ಟರ್ ರ್ಯಾಲಿಯ ಮೂಲಕ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಪಂಚಮಸಾಲಿ ಸಮಾಜದವರ ನಡುವೆ ತಳ್ಳಾಟ ನೂಕಾಟ ನಡೆದಿದೆ.

ಆಕ್ರೋಶಗೊಂಡ ಪ್ರತಿಭಟನಾಕಾರರು ಸರ್ಕಾರಿ ವಾಹನಗಳು, ಶಾಸಕರು ಮತ್ತು ಎಂಎಲ್‌ಸಿಗಳಿಗೆ ಸೇರಿದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದರು. ಕಲ್ಲು ತೂರಾಟದಲ್ಲಿ ಇಪ್ಪತ್ತಕ್ಕೂ ಅಧಿಕ ಪೊಲೀಸರಿಗೆ ಗಾಯ‌ಗಳಾಗಿದ್ದರೆ, ಐವತ್ತಕ್ಕೂ ಅಧಿಕ ಹೋರಾಟಗಾರರು ಗಾಯಗೊಂಡಿದ್ದಾರೆ.

ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಆರ್ ಹಿತೇಂದ್ರ ಅವರು ಲಾಠಿ ಚಾರ್ಜ್‌ಗೆ ಆದೇಶಿಸಿದ್ದಾರೆ.

ಲಾಠಿ ಚಾರ್ಜ್ ನಲ್ಲಿ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪರಿಸ್ಥಿತಿ ಕೈಮೀರುವ ಹಂತಕ್ಕೆ ಹೋಗಿದೆ. ಹೀಗಾಗಿ ಪ್ರತಿಭಟನೆಯ ನೇತೃತ್ವ ವಹಿಸಿರುವ ಕುಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚುವರಿ ಎಸ್ಪಿ ನಾರಾಯಣ್ ಬರಮಣಿ ಅವರು ಸ್ವಾಮೀಜಿ ಅವರನ್ನು ಇನ್ನೋವಾ ಕಾರಿನಲ್ಲಿ ಕರೆದುಕೊಂಡು ಹೋದರು.

ಇನ್ನು ರಾಜಕೀಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಈರಣ್ಣ ಕಡಾಡಿ, ಅರವಿಂದ್ ಬೆಲ್ಲದ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಲಾಠಿ ಚಾರ್ಜ್​ ಘಟನೆ ಬಳಿಕ ಜಯಮೃತ್ಯುಂಜಯ ಶ್ರೀ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದ ಮುಖಂಡರು ಸಭೆ ಮಾಡಿದ್ದು, ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಿದರು. ಬಳಿಕ ಚೆನ್ನಮ್ಮ ವೃತ್ತಕ್ಕೆ ಮಾಲಾರ್ಪಣೆ ಪಂಚಮಸಾಲಿ ಮಕ್ಕಳ ಮೇಲೆ ಲಾಠಿಚಾರ್ಜ್ ಮಾಡಿದ್ದಾರೆಂದು ಸರ್ಕಾರ ವಿರುದ್ಧ ಧಿಕ್ಕಾರ ಕೂಗಿದರು.

ಮಾಧ್ಯಮಗಳ ಜತೆ ಮಾತನಾಡಿದ ಮೃತ್ಯುಂಜಯ ಸ್ವಾಮೀಜಿ, ಹೋರಾಟದ ಸ್ಥಳಕ್ಕೆ ಸಿಎಂ ಬರಬೇಕು ಎಂದು ನಮ್ಮ ಆಗ್ರಹ ಇತ್ತು. ಸ್ಥಳಕ್ಕೆ ಬಂದ ಸಚಿವರ ಮಾತು ಸಮಾಧಾನ ತರಲಿಲ್ಲ. ಹಾಗಾಗಿ ನಾವು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹೊಗುತ್ತಿದ್ದೆವು. ಅಲ್ಲಿದ್ದ ಎಡಿಜಿಪಿ, ಕಮಿಷನರ್ ಕುತಂತ್ರದಿಂದ ಹೊಡೆದರು. ಇದನ್ನ ಸಿಎಂ ಅವರು ಹೇಳಿ ಮಾಡಿಸಿದ್ದಾರೆ ಎನ್ನುವ ಅನುಮಾನ ಇದೆ. ಸಿಎಂ ಅವರ ಹತಾಶೆ ಭಾವನೆಯಿಂದ ಕಿಚ್ಚಿನಿಂದ ನಮ್ಮವರ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದು, ಬಹಳಷ್ಟು ಜನರಿಗೆ ಕೈಕಾಲು ಮುರಿದಿದ್ದಾರೆ. ಲಿಂಗಾಯತರ ಮೇಲೆ ಹಲ್ಲೆ ಮಾಡಿದ ಸರ್ಕಾರ ಏಕೈಕ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಲಾಠಿಚಾರ್ಜ್​ನಲ್ಲಿ ಗಾಯಗೊಂಡವರನ್ನ ಭೇಟಿಯಾಗಿ ಅವರ ಚಿಕಿತ್ಸೆ ವೆಚ್ಚ ಭರಿಸುತ್ತೇವೆ. ನಿಮಗೆ ಅನ್ಯಾಯ ಮಾಡಿ ದೌರ್ಜನ್ಯ ಮಾಡಿದ್ದಕ್ಕೆ ತಕ್ಕ ಉತ್ತರ ಕೊಡುತ್ತೇವೆ. ಮುಂದಿನ ಹೋರಾಟವನ್ನ ಪ್ರಕಟ ಮಾಡುತ್ತೇವೆ. ಸಿಎಂ ಅವರನ್ನ ನಾವು ಕರೆದರೂ ಅವರು ಬರಲಿಲ್ಲ. ಅವರು ನಮ್ಮನ್ನ ಕರೆಯುವ ಸೌಜನ್ಯ ಮಾಡಲಿಲ್ಲ. ಹೀಗಾಗಿ ನಾವೇ ಅವರ ಬಳಿ ಹೋಗುತ್ತಿದ್ದೆವು ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist