ಹಿಮದಿಂದ ಕೂಡಿದ್ದ ಟ್ರ್ಯಾಕ್‌ನಿಂದ ಜಾರಿ ಕಮರಿಗೆ ಬಿದ್ದ ವಾಹನ – 3 ಯೋಧರು ಹುತಾತ್ಮ
Twitter
Facebook
LinkedIn
WhatsApp
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕುಪ್ವಾರದ ಮಚ್ಚಲ್ ಸೆಕ್ಟರ್‌ನ ಮುಂಚೂಣಿ ಪ್ರದೇಶದಲ್ಲಿ ಕಾರ್ಯಾಚರಣೆ ವೇಳೆ ಸಂಭವಿಸಿದ ಅಪಘಾತದಲ್ಲಿ ಮೂವರು ಭಾರತೀಯ ಸೇನಾ ಸಿಬ್ಬಂದಿ (Army Personnel) ಹುತಾತ್ಮರಾಗಿದ್ದಾರೆ.
ಒಬ್ಬರು ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಮತ್ತು ಇಬ್ಬರು ಇತರ ಶ್ರೇಣಿಯ (OR) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ವಾಹನವು ಹಿಮದಿಂದ ತುಂಬಿದ ಟ್ರ್ಯಾಕ್‌ನಿಂದ ಜಾರಿ ಕಮರಿಗೆ ಬಿದ್ದಿದೆ.
ದುರಂತದಲ್ಲಿ ಮೂವರು ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಹುತಾತ್ಮ ಯೋಧರ ಪಾರ್ಥೀವ ಶರೀರಗಳನ್ನು ಪಡೆಯಲಾಗಿದೆ ಎಂದು ಸೇನೆಯ ಚಿನಾರ್ ಕಾರ್ಪ್ಸ್ ತಿಳಿಸಿದ್ದಾರೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 16 ಮಂದಿ ಭಾರತೀಯ ಸೈನಿಕರು ಮಡಿದಿದ್ದರು. ಟ್ರಕ್ ಸಿಕ್ಕಿಂನಲ್ಲಿ ಕಮರಿಗೆ ಬಿದ್ದು ಮೂವರು ಅಧಿಕಾರಿಗಳು ಸೇರಿ 16 ಸೈನಿಕರು ಹುತಾತ್ಮರಾಗಿದ್ದರು.