ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರ ಚಿಕಿತ್ಸೆ; ಕಣ್ಣಿನ ಕೆಳಗೆ ಸಿಲುಕಿದ್ದ ಟೂತ್ ಬ್ರಶ್ ತುಂಡು ತೆಗೆದ ವೈದ್ಯರು!

Twitter
Facebook
LinkedIn
WhatsApp
ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರ ಚಿಕಿತ್ಸೆ; ಕಣ್ಣಿನ ಕೆಳಗೆ ಸಿಲುಕಿದ್ದ ಟೂತ್ ಬ್ರಶ್ ತುಂಡು ತೆಗೆದ ವೈದ್ಯರು!

ಹುಬ್ಬಳ್ಳಿ: ಅಪರೂಪದ ಶಸ್ತ್ರ ಚಿಕಿತ್ಸೆವೊಂದರಲ್ಲಿ ಹುಬ್ಬಳ್ಳಿಯ ಕಿಮ್ಸ್ ವೈದ್ಯರು 28 ವರ್ಷದ ಮಹಿಳೆಯೊಬ್ಬರ ಕಣ್ಣಿನ ಕೆಳಗೆ ಸಿಲುಕಿದ್ದ ಮುರಿದ ಟೂತ್ ಬ್ರಶ್ ವೊಂದನ್ನು ಹೊರ ತೆಗೆದಿದ್ದಾರೆ. ಮೂರು ದಿನಗಳ ಹಿಂದೆ ಮುರಿದ 7 ಇಂಚಿನ ಟೂತ್ ಬ್ರಶ್ ಕಣ್ಣಿನ ಕೆಳಗೆ ಸಿಲುಕಿತ್ತು. ವೈದ್ಯರು ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಮುರಿದ ಪ್ಲಾಸ್ಟಿಕ್ ಟೂತ್ ಬ್ರಶ್ ನ್ನು ಹೊರ ತೆಗೆದಿದ್ದಾರೆ.

 

ಹಾವೇರಿ ಜಿಲ್ಲೆ ಹಾನಗಲ್ ಬಳಿಯ ಹಿರೂರು ಗ್ರಾಮದ ಗೃಹಿಣಿ ವಿನೋದಾ ತಳವರ್ (28) ಅವರ ನಾಲ್ಕು ವರ್ಷದ ಮಗಳು ಆಗಸ್ಟ್ 14 ರಂದು ಬೆಳಗ್ಗೆ ಹಲ್ಲು ಉಜ್ಜುವಾಗ ಇದ್ದಕ್ಕಿದ್ದಂತೆ ಟೂತ್ ಬ್ರಶ್ , ಆಕೆಯ ತಾಯಿಯ ಎಡಗಣ್ಣಿನ ಕೆಳಗೆ ಸಿಲುಕಿದೆ. ನಂತರ ಕುಟುಂಬ ಸದಸ್ಯರು ಅದನ್ನು ತೆಗೆಯಲು ಪ್ರಯತ್ನಿಸಿದಾಗ ಮುರಿದಿದೆ.

ಕೂಡಲೇ ಅವರು ಮಹಿಳೆಯನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ರೋಗಿಯನ್ನು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲು ಶಿಫಾರಸು ಮಾಡಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಭಾನುವಾರ ಮಹಿಳೆಯನ್ನು ದಾಖಲಿಸಲಾಗಿತ್ತು. ವೈದ್ಯರು ಮುಖದ ಸಿಟಿ ಸ್ಕ್ಯಾನ್, ಸಿಟಿ ಆಂಜಿಯೋಗ್ರಾಮ್ ಮಾಡಿದಾಗ ಕಣ್ಣಿನ ಕೆಳಗೆ ಬ್ರಶ್ ಸಿಲುಕಿರುವುದು  ತಿಳಿದುಬಂದಿದೆ.

ಸ್ಕ್ಯಾನ್ ವರದಿ ತನಿಖೆ ವೇಳೆ ಎಡಗಣ್ಣು ಸಂಪೂರ್ಣವಾಗಿ ಹಾನಿಯಾಗಿರುವುದು ಕಂಡುಬಂದಿತ್ತು. ನಂತರ ನೇತ್ರಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಕೂಡಲೇ ಶಸ್ತ್ರ ಚಿಕಿತ್ಸೆ ಮಾಡಲು ನಿರ್ಧರಿಸಿದ್ದಾಗಿ ಹಿರಿಯ ವೈದ್ಯರೊಬ್ಬರು ತಿಳಿಸಿದರು. ಸಂಪೂರ್ಣ ಅಧ್ಯಯನ ನಂತರ, ಬುಧವಾರ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಲಾಯಿತು. ಡಾ. ಮಂಜುನಾಥ್ ವಿಜಯಪುರ, ಡಾ. ವಸಂತ್ ಕಟ್ಟಿಮನಿ, ಡಾ. ಅನುರಾಧ ನಾಗನಗೌಡರ್, ಡಾ. ಸ್ಫೂರ್ತಿ ಶೆಟ್ಟಿ ಮತ್ತು ಅರವಳಿಕೆ ಮತ್ತು ನೇತ್ರಶಾಸ್ತ್ರ ವಿಭಾಗದ ಸಿಬ್ಬಂದಿಯ ನೆರವಿನಿಂದ ಬುಧವಾರ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.

ಎರಡು ತಿಂಗಳ ಹಿಂದೆ ಇದೇ ರೀತಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿ ಹಳಿಯಾಳದ ವ್ಯಕ್ತಿಯೊಬ್ಬರ ಮ್ಯಾಕ್ಸಿಯೋಫೆಶಿಯಲ್ ಪ್ರದೇಶದಲ್ಲಿ ಸಿಲುಕಿದ್ದ 6 ಸೆಂಟಿ ಮೀಟರ್ ಚಾಕುವನ್ನು ಹೊರ ತೆಗೆಯಲಾಗಿತ್ತು. ಅದೇ ರೀತಿಯಲ್ಲಿ ಈ ಬಾರಿ ಅಪರೂಪದ ಶಸ್ತ್ರ ಚಿಕಿತ್ಸೆ ನಡೆಸಿ, 7 ಸೆಂಟಿ ಮೀಟರ್ ನಷ್ಟು ಉದ್ದದ ಮುರಿದು ಟೂತ್ ಬ್ರಶ್ ಚೂರೊಂದನ್ನು ಹೊರತೆಗೆಯಲಾಗಿದೆ. ಶಸ್ತ್ರ ಚಿಕಿತ್ಸೆ ನಂತರ ರೋಗಿ ಆರೋಗ್ಯವಾಗಿದ್ದು, ಮೂರ್ನಾಲ್ಕು ದಿನಗಳಲ್ಲಿ ಅವರನ್ನು ಮನೆಗೆ ಕಳುಹಿಸಲಾಗುವುದು ಎಂದು ಕಿಮ್ಸ್ ಆಸ್ಪತ್ರೆಯ ವೈದ್ಯ ಡಾ. ಮಂಜುನಾಥ್ ವಿಜಯಪುರ ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ