ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೆಣವಾಗಿ ಪತ್ತೆಯಾದ ಖ್ಯಾತ ನಟಿಯ ಅಕ್ಕ

Twitter
Facebook
LinkedIn
WhatsApp
ಹೆಣವಾಗಿ ಪತ್ತೆಯಾದ ಖ್ಯಾತ ನಟಿಯ ಅಕ್ಕ

ಮರಾಠಿಯ ಖ್ಯಾತ ನಟಿ ಭಾಗ್ಯಶ್ರೀ ಮೋಟೆ (Bhagyashree Mote) ಅವರ ಸಹೋದರಿ ಮಧು ಮಾರ್ಕಂಡೇಯ ಅವರು ನಿಧನ ಹೊಂದಿದ್ದಾರೆ. ಮಹಾರಾಷ್ಟ್ರದ ಪಿಂಪ್ರಿ-ಚಿಂಚ್​ವಾಡ್​ನ ವಾಕಡ್​ನಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ಸಾಯುವಾಗ ಮಧು (Madhu Markandeya) ಮುಖದ ಮೇಲೆ ಗಾಯದ ಗುರುತಿದ್ದು ಈ ಸಂಬಂಧ ತನಿಖೆ ನಡೆಯುತ್ತಿದೆ. ಸದ್ಯ ಪೊಲೀಸರು ಇದನ್ನು ಆಕಸ್ಮಿಕ ಸಾವು ಎಂದೇ ದಾಖಲುಮಾಡಿಕೊಂಡಿದ್ದಾರೆ. ಆದರೆ, ಈ ಬಗ್ಗೆ ಕೆಲ ಅನುಮಾಗಳ ಕೂಡ ಮೂಡಿವೆ.

ಮಧು ಅವರು ಬೇಕರಿ ಹೊಂದಿದ್ದಾರೆ. ಈ ಬಿಸ್ನೆಸ್​ನಿಂದ ಅವರಿಗೆ ಒಳ್ಳೆಯ ಹಣ ಬರುತ್ತಿತ್ತು. ಅವರು ತಮ್ಮ ಉದ್ಯಮವನ್ನು ವಿಸ್ತರಿಸಿಕೊಳ್ಳಬೇಕು ಎನ್ನುವ ಆಲೋಚನೆಯಲ್ಲಿ ಇದ್ದರು. ಭಾನುವಾರ (ಮಾರ್ಚ್ 12) ಅವರು ಹೊಸ ಬೇಕರಿ ಮಾಡಲು ಕಟ್ಟಡ ನೋಡಲು ತೆರಳಿದ್ದರು. ಈ ವೇಳೆ ಅವರಿಗೆ ತಲೆಸುತ್ತು ಬಂದಿದೆ. ಆಗ ಅವರು ಕುಸಿದು ಬಿದ್ದಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಮಧು ಸಾವಿನ ಬಗ್ಗೆ ಅವರ ಕುಟುಂಬದವರಿಗೆ ಅನುಮಾನ ಇದೆ. ಮಧು ಮುಖದಮೇಲೆ ಗಾಯದ ಗುರುತುಗಳಿದ್ದವು ಎನ್ನಲಾಗಿದೆ. ಹೀಗಾಗಿ, ಅವರನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬ ಸದಸ್ಯರು ದೂರಿದ್ದಾರೆ. ಆದರೆ, ಇದನ್ನು ಆಕಸ್ಮಿಕ ಸಾವು ಎಂದು ಪೊಲೀಸರು ಹೇಳುತ್ತಿದ್ದಾರೆ. ಇದನ್ನು ಒಪ್ಪಲು ಕುಟುಂಬದವರು ಸಿದ್ಧರಿಲ್ಲ. ಸದ್ಯ ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ